ನಿನ್ನೇ ಮದುವೆಯಾಗ್ತೀನಿ ಎಂದು ಹೇಳಿ ರೇಪ್‌ ಮಾಡಿದ 59ರ ವ್ಯಕ್ತಿ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಉತ್ತರ ಪ್ರದೇಶದಲ್ಲಿ ಮದುವೆಯಾಗುವುದಾಗಿ ನಂಬಿಸಿ ನರ್ಸ್‌ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 59 ವಯಸ್ಸಿನ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಭದೋಹಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ಪ್ರಯೋಗಾಲಯ ತಂತ್ರಜ್ಞರಾಗಿ ಕೆಲಸ ಮಾಡುತ್ತಿದ್ದ ಚಿಂತಾಮಣಿ ಶರ್ಮಾ ಎಂಬ ವ್ಯಕ್ತಿ 39 ವಯಸ್ಸಿನ ನರ್ಸ್‌ ಮೇಲೆ 21 ವರ್ಷಗಳ ಅವಧಿಯಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪ ಕೇಳಿಬಂದಿದೆ.

ಆರೋಪಿ ವಿರುದ್ಧ ಚೀಫ್ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಸಬಿಹಾ ಖಾತೂನ್ ನ್ಯಾಯಾಲಯದಲ್ಲಿ ಸಂತ್ರಸ್ತೆ ನರ್ಸ್‌ ಪ್ರಕರಣದ ವಿಚಾರಣೆ ನಡೆಸಿತ್ತು. ಅರ್ಜಿಯನ್ನು ಆಲಿಸಿದ ಸಿಜೆಎಂ, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಗುರುವಾರ ಪೊಲೀಸರಿಗೆ ಆದೇಶಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!