ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರಿ ಬಸ್ ಹಿಂಬದಿ ಚಕ್ರಕ್ಕೆ ಸಿಲುಕಿ ವೃದ್ಧೆ ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಚೆನ್ನಮ್ಮ ವೃತ್ತದ ಬಳಿ ನಡೆದಿದೆ.
ಅಜ್ಜಿಗೆ ಸುಮಾರು 60 ವರ್ಷ ವಯಸ್ಸು ಎಂದು ಗುರುತಿಸಲಾಗಿದೆ. ಬೇರೆ ಊರಿನಿಂದ ಬೆಳಗಾವಿಗೆ ಬಂದಿದ್ದ ಅಜ್ಜಿ ಎಡದಿಂದ ಬಲಕ್ಕೆ ರಸ್ತೆ ದಾಟುತ್ತಿದ್ದ ವೇಳೆ ಬಸ್ ಸಿಗ್ನಲ್ ಬಿಟ್ಟು ಮುಂದೆ ಬಂದಿದೆ, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಜ್ಜಿ ಬಸ್ ನ ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಬೆಳಗಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.