ಒಂದು ವಾರದಿಂದ ನಾಪತ್ತೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಂದು ವಾರದಿಂದ ನಾಪತ್ತೆಯಾಗಿದ್ದ ಏಳು ವರ್ಷದ ಬಾಲಕಿ ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಅನುಶ್ರೀ ಮಡಿವಾಳರ್ ಎಂಬ 7 ವರ್ಷದ ಬಾಲಕಿ ಮೃತ ದುರ್ದೈವಿ. ಏಪ್ರಿಲ್ 19 ರಂದು ಅನುಶ್ರೀ ಮನೆಯಲ್ಲಿ ರಾತ್ರಿ ಊಟ ಮುಗಿಸಿ ನಾಪತ್ತೆಯಾಗಿದ್ದಳು. ಅಜ್ಜಿಯೊಂದಿಗೆ ಮನೆಯಲ್ಲಿದ್ದ ಬಾಲಕಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು. ಇದರಿಂದ ಕಂಗಾಲಾದ ಪೋಷಕರು ಇಡೀ ಗ್ರಾಮದಲ್ಲಿ ಹುಡುಕಾಟ ನಡೆಸಿದ್ದಾರೆ. ಬಾಲಕಿ ಪತ್ತೆಯಾಗದ ಕಾರಣ ಕೊಪ್ಪಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೊಲೀಸರು ಬಾಲಕಿಯನ್ನು ಹುಡುಕುತ್ತಿದ್ದರು. ಹುಡುಗಿ ಎಲ್ಲಿಯೂ ಪತ್ತೆಯಾಗಿಲ್ಲ. ಆದರೆ ಇದೀಗ ಅದೇ ಕಿನ್ನಾಳ ಗ್ರಾಮದಲ್ಲಿ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ನಾಪತ್ತೆಯಾಗಿದ್ದ ಬಾಲಕಿ ಇದೀಗ ಅದೇ ಗ್ರಾಮದಲ್ಲಿ ಶವವಾಗಿ ಪತ್ತೆಯಾಗಿದ್ದು ಭಾರೀ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!