Wednesday, November 29, 2023

Latest Posts

ರಾಜ್ಯಸಭೆ ಚುನಾವಣೆ ಬಳಿಕ ಎ-ಬಿ ಟೀಮ್ ಹಣೆಬರಹ ಬಯಲಿಗೆ: ಸಿ.ಟಿ. ರವಿ

ಹೊಸದಿಗಂತ ವರದಿ,ಮದ್ದೂರು:

ರಾಜ್ಯಸಭೆ ಚುನಾವಣೆ ನಂತರ ಎ ಮತ್ತು ಬಿ ಟೀಮ್ ಹಣೇಬರಹ ಬಯಲಿಗೆ ಬರುತ್ತಿದೆ ಎಂದು ಬಿಜೆಪಿ ರಾಷ್ಟಿçÃಯ ಪ್ರದಾನ ಕರ‍್ಯದರ್ಶಿ ಸಿ.ಟಿ. ರವಿ ಗುರುವಾರ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವ್ಯಂಗ್ಯವಾಡಿದರು.
ತಾಲೂಕಿನ ಸೋಮನಹಳ್ಳಿಯ ಖಾಸಗೀ ಹೊಟೇಲ್‌ನಲ್ಲಿ ದಕ್ಷಿಣ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ. ರವಿಶಂಕರ್ ಪರ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಕರ‍್ಯಕರ್ತರ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಬೆಂಬಲ ಕೋರಿರುವ ಬಗ್ಗೆ ಎರಡೂ ಪಕ್ಷಗಳ ನಾಯಕರ ವಿವೇಚನೆಗೆ ಬಿಟ್ಟ ವಿಚಾರವಾಗಿದೆ. ಇದಕ್ಕೆ ನಮ್ಮ ಆಕ್ಷೇಪಣೆ ಇಲ್ಲ. ಸಂಖ್ಯಾಬಲದ ಕೊರತೆಯಿಂದ ಚುನಾವಣೆಯಲ್ಲಿ ಜೆಡಿಎಸ್ ಮತ ಕೇಳುವುದಕ್ಕೆ ಸರ್ವ ಸ್ವತಂತ್ರವಾಗಿದೆ. ಬೆಂಬಲ ನೀಡುವುದು ಕಾಂಗ್ರೆಸ್ ನಾಯಕರಿಗೆ ಬಿಟ್ಟ ವಿಚಾರವಾಗಿದೆ ಎಂದು ಹೇಳಿದರು.
ಚುನಾವಣೆಯಲ್ಲಿ ಬಿಜೆಪಿಯ ೩೨ ಹೆಚ್ಚುವರಿ ಮತಗಳಿವೆ. ಬೇರೆ ಪಕ್ಷಗಳ ನಾಯಕರುಗಳು ಸಹ ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿಯ ಪರ ಒಲವು ಹೊಂದಿದ್ದಾರೆ. ಇಂತಹ ನಾಯಕರ ಮತಗಳನ್ನು ಅನುಕೂಲಕರವಾಗಿ ಪರಿವರ್ತನೆ ಮಾಡಿಕೊಡಬೇಕು. ಹಾಗೂ ಪಕ್ಷದ ಹೆಚ್ಚುವರಿ ಮತಗಳನ್ನು ಹಿಡಿದಿಟ್ಟುಕೊಂಡು ಅನುಕೂಲ ಪಡೆದುಕೊಳ್ಳಬೇಕು ಎಂಬ ಕಾರಣಕ್ಕೆ ಬಿಜೆಪಿ ಮೂವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಚುನಾವಣೆಯಲ್ಲಿ ಎಲ್ಲರೂ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ಬಿಜೆಪಿ ಪರ ಬಹುದೊಡ್ಡ ಬಲ ಹಾಗೂ ಒಲವು ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್‌ನ ಜನನಾಯಕರುಗಳು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ. ಇಂತಹ ಬೆಳವಣಿಗೆಗಳಿಂದ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಹೆಚ್ಚು ಲಾಭವಾಗುವುದರಲ್ಲಿ ಸಂಶಯವಿಲ್ಲ. ಪದವೀಧರ ಕ್ಷೇತ್ರದ ಚುನಾವಣೆ ಮುಂದಿನ ಸಾರ್ವತ್ರಿಕ ಚುನಾವಣೆಗೆ ಮುನ್ನುಡಿ ಬರೆಯಲಿದೆ ಎಂದು ಹೇಳಿದರು.
ಸಚಿವ ನಾರಾಯಣಗೌಡ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ರಮೇಶ್ ನಡುವಿನ ವಾಕ್ಸಮರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿ.ಟಿ. ರವಿ, ಕಳೆದ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ವಾಭಿಮಾನಿ ಅಭ್ಯರ್ಥಿಯಾಗಿದ್ದ ಸುಮಲತಾ ಅಂಬರೀಶ್ ವಿರುದ್ಧ ಜೆಡಿಎಸ್ ನಾಯಕರು ನಡೆದುಕೊಂಡ ಹೀನ ಸಂಸ್ಕೃತಿಗೆ ಜಿಲ್ಲೆಯ ಜನರು ಚುನಾವಣಾ ಫಲಿತಾಂಶದ ಮೂಲಕ ತಕ್ಕ ಪಾಠ ಕಲಿಸಿದ್ದಾರೆ ಎಂದು ಲೇವಡಿ ಮಾಡಿದರು.
ಜೆಡಿಎಸ್ ನಾಯಕರ ಇಂತಹ ಸಂಘರ್ಷವನ್ನು ಹಿಂದೆಯೂ ನೋಡಿದ್ದೆವೆ. ಮುಂದೆಯೂ ನಡೆಯುತ್ತಿದೆ ಎಂಬ ಸಂಶಯವಿದೆ. ಇದನ್ನು ಎದುರಿಸಲು ನಾವು ಸಿದ್ಧರಿದ್ದೇವೆ ಎಂದು ಸಿ.ಟಿ. ರವಿ ಸವಾಲು ಹಾಕಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ. ಉಮೇಶ್, ಮನ್‌ಮುಲ್ ನಿರ್ದೇಶಕರಾದ ಎಸ್.ಪಿ. ಸ್ವಾಮಿ, ರೂಪಾ, ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಪಣ್ಣೇದೊಡ್ಡಿ ರಘು, ನಗರ ಘಟಕದ ಅಧ್ಯಕ್ಷ ಮಧುಕುಮಾರ್, ರೈತ ಮೋರ್ಚಾ ಅಧ್ಯಕ್ಷ ಶಿವದಾಸ್ ಸತೀಶ್, ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ, ಯುವ ಘಕದ ಅಧ್ಯಕ್ಷ ಸುನಿಲ್, ಮುಖಂಡರಾದ ಅಶೋಕ್ ಜಯರಾಂ, ಇಂಡುವಾಳು ಸಚ್ಚಿದಾನಂದ, ಎಂ.ಸಿ. ಸಿದ್ದು, ರಾಮೇಗೌಡ, ಮಧು, ಎಚ್.ಪಿ. ಸ್ವಾಮಿ, ಪೂರ್ಣಿಮಾ, ನಾಗರತ್ನ, ಸಿಂಧು, ಕಲಾವತಿ, ಸುರೇಶ್ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!