ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಕ್ಕದ ಬಿಲ್ಡಿಂಗ್‌ನಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ನೆರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಬಂದ ಪೊಲೀಸರು ಕಟ್ಟಡದ ಬಾಗಿಲು ಒಡೆದು ನೋಡಿ ಶಾಕ್ ಆಗಿದ್ದಾರೆ.
ಶಿಥಿಲಗೊಂಡಿರುವ ಕಟ್ಟಡದಲ್ಲಿ ಪೊಲೀಸ್ ಹೆಡ್‌ಕಾನ್ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಡುಗೋಡಿಯಲ್ಲಿ ನಡೆದಿದೆ.
ಮುಬಾರಕ್ ಸಿಕಿಂಧರ್ ಮುಜಾವರ್ ಆತ್ಮಹತ್ಯೆ ಮಾಡಿಕೊಂಡ ಹೆಡ್‌ಕಾನ್ಸ್ಟೇಬಲ್. ಇವರು ಕಳೆದ 15 ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹ ವಾಸನೆ ಬಂದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಮುಬಾರಕ್ ಸಿಕಿಂದರ್ ಕಳೆದ ಏಳು ವರ್ಷಗಳಿಂದ ಸಿಎಆರ್ ದಕ್ಷಿಣದಲ್ಲಿ ಕೆಲಸ ಮಾಡಿಕೊಂಡಿದ್ದರು. ಮೂರು ವರ್ಷಗಳ ಹಿಂದೆ ಮದುವೆ ಕೂಡ ಮಾಡಿಕೊಂಡಿದ್ದರು. ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ತಿಳಿದಿಲ್ಲ.