ಕರಾವಳಿಯಲ್ಲಿ ಮತ್ತೆ ಸದ್ದು ಮಾಡಿದ ನಿಷೇಧಿತ ಸ್ಯಾಟಲೈಟ್ ಫೋನ್!

ಹೊಸದಿಗಂತ ವರದಿ, ಮಂಗಳೂರು:

ನಿಷೇಧಿತ ಸ್ಯಾಟಲೈಟ್ ಫೋನ್ ಕರಾವಳಿಯಲ್ಲಿ ಮತ್ತೆ ಸದ್ದು ಮಾಡಿದೆ. ಕರಾವಳಿ ಭಾಗದಲ್ಲಿ ಉಗ್ರಗಾಮಿಗಳ ಸ್ಲೀಪರ್ ಸೆಲ್‌ಗಳು ಕಾರ್ಯಾಚರಿಸುತ್ತಿವೆ ಎಂಬ ಗುಮಾನಿ ನಡುವೆ ಸ್ಯಾಟಲೈಟ್ ಫೋನ್ ಬಳಕೆ ಮತ್ತೆ ಮತ್ತೆ ಪತ್ತೆಯಾಗುತ್ತಿರುವುದು ಆತಂಕ ಮೂಡಿಸಿದೆ.
ಆರು ತಿಂಗಳ ಬಳಿಕ ಕರಾವಳಿಯ ಮೂರು ಕಡೆಗಳಲ್ಲಿ ಹಾಗೂ ಚಿಕ್ಕಮಗಳೂರಿನ ದಟ್ಟಾರಣ್ಯದಲ್ಲಿ ನಿಷೇಧಿತ ಸ್ಯಾಟಟೈಟ್ ಫೋನ್‌ಗಳ ಸಿಗ್ನಲ್ ಪತ್ತೆಯಾಗಿದೆ. ಮೇ 23ರಿಂದ 29ರ ವರೆಗೆ ಮಂಗಳೂರಿನ ಎರಡು ಕಡೆ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಯ ದಟ್ಟಾರಣ್ಯದಲ್ಲಿ ಸ್ಯಾಟಟೈಟ್ ಫೋನ್ ಬಳಕೆ ಮಾಡಿರುವುದನ್ನು ಕೇಂದ್ರ ಗುಪ್ತಚರ ಇಲಾಖೆ ಪತ್ತೆ ಮಾಡಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಆಂತರಿಕ ಭದ್ರತಾ ವಿಭಾಗ (ಐಎಸ್‌ಡಿ) ಸ್ಥಳಕ್ಕೆ ತೆರಳಿ ತನಿಖೆ ಕೈಗೆತ್ತಿಕೊಂಡಿದೆ. ಕಳೆದ 10 ದಿನಗಳ ಅವಧಿಯಲ್ಲಿ ನಾಲ್ಕು ಕಡೆಗಳಿಂದ ಸ್ಯಾಟಲೈಟ್ ಫೋನ್ ಸಿಗ್ನಲ್ ಸಂಪರ್ಕಿಸಿರುವುದು ಪತ್ತೆಯಾಗಿದೆ. ಈ ಬಾರಿ ಉತ್ತರ ಕನ್ನಡ ಜಿಯ ಯಪುರ- ಶಿರಸಿಯ ಮಧ್ಯ ಇರುವ ದಟ್ಟಾರಣ್ಯ ಪ್ರದೇಶದಲ್ಲಿ, ಮಂಗಳೂರು ನಗರ ಹೊರಭಾಗದ ನಾಟೆಕಲ, ಕುಳಾಯಿ ಹಾಗೂ
ಚಿಕ್ಕಮಗಳೂರಿನ ಕಡೂರು-ಬೀರೂರು ನಡುವಿನ ಅರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಸಿಗ್ನಲ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಈಗ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಸಿಗ್ನಲ್ ಪತ್ತೆಯಾದ ಪ್ರದೇಶಗಳಿಗೆ ತೆರಳಿ ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!