March 9, 2026
Monday, March 9, 2026
spot_img

ವಿಶ್ವಕಪ್ ಫೈನಲ್ ನಲ್ಲಿ ಸಿಕ್ಸರ್ ಗಳ ಸುರಿಮಳೆ: ವಿಶ್ವದಾಖಲೆ ಬರೆದ ಸಂಜು ಸಾಮ್ಸನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್ ಫೈನಲ್ ನಲ್ಲಿ ಟೀಂ ಇಂಡಿಯಾ ಓಪನರ್​ ಸಂಜು ಸಾಮ್ಸನ್ ಸ್ಪೋಟಕ ಬ್ಯಾಟಿಂಗ್ ನಡೆಸಿದ್ದಾರೆ.

ಫೈನಲ್​​ ಪಂದ್ಯದಲ್ಲಿ ಸಂಜು ಸಾಮ್ಸನ್​​, 89 ರನ್​ಗಳಿಸಿ ನಿರ್ಗಮಿಸಿದ್ದಾರೆ. ಈ ಮಹತ್ವದ ಪಂದ್ಯದ ವೇಳೆ ಸಂಜು ಸಾಮ್ಸನ್​ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. 2026 ಟಿ20 ವಿಶ್ವಕಪ್​​ ಆವೃತ್ತಿಯಲ್ಲಿ ಬರೋಬ್ಬರಿ 24 ಸಿಕ್ಸರ್​ ಬಾರಿಸಿರುವ ಮೂಲಕ, ಟಿ20 ವಿಶ್ವಕಪ್ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

2026ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಇದುವರೆಗೆ ಕೇವಲ 5 ಪಂದ್ಯಗಳನ್ನು ಆಡಿರುವ ಸಂಜು ಸ್ಯಾಮ್ಸನ್ 24 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ಅವರ 15 ಸಿಕ್ಸರ್‌ಗಳ ದಾಖಲೆಯನ್ನು ಮೀರಿಸಿದ್ದಾರೆ.

46 ಬಾಲ್​ಗಳನ್ನು ಎದುರಿಸಿ 89 ರನ್​ಗಳಿಸಿ ಔಟಾಗುವ ಮೂಲಕ ಶತಕ ವಂಚಿತರಾಗಿದ್ದಾರೆ. ಐದು ಬೌಂಡರಿ ಜೊತೆ 8 ಸಿಕ್ಸರ್​​ ಸಿಡಿಸುವ ಮೂಲಕ ಟಿ20 ವಿಶ್ವಕಪ್​ ಆವೃತ್ತಿಯಲ್ಲಿ ಅತಿ ಹೆಚ್ಚು ಸಿಡಿಸಿದ ಆಟಗಾರ ಎಂಬ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ. ಸಂಜು ಅವರ ಹಿಂದೆ ಫಿನ್​ ಅಲೆನ್​​ ಇದ್ದು, 20 ಸಿಕ್ಸರ್​ ಸಿಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !