ಹೊಸದಿಗಂತ ವರದಿ ,ಮೈಸೂರು:
ಸಂವಿಧಾನ ಬದಲಿಸಲು ದೊಡ್ಡ ಷಡ್ಯಂತ್ರವನ್ನೇ ನಡೆಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದರು.
ಗುರುವಾರ ಮೈಸೂರಿನ ಕಾಂಗ್ರೆಸ್ ಭವನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನದ ತತ್ವ ಸಿದ್ಧಾಂತವೇ ಕಾಂಗ್ರೆಸ್ ನ ತತ್ವ ಸಿದ್ಧಾಂತ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ತಂದ ಸಾಂವಿಧಾನಿಕ ತಿದ್ದುಪಡಿಗಳು, ನೀತಿಗಳ ಮೂಲಕ ಈ ದೇಶ ಕಟ್ಟಲಾಗಿದೆ. ಈಗ ಜಾತಿ, ಧರ್ಮ, ಭಾಷೆ ಮತ್ತಿತರ ವಿಚಾರದಲ್ಲಿ ದ್ವೇಷ ಬಿತ್ತಿ ಸಮಾಜ ಒಡೆಯುವ ಕಾರ್ಯಕ್ಕೆ ಕೆಲವರು ಮುಂದಾಗಿದ್ದಾರೆ. ನಮ್ಮ ಮುಂದಿನ ಪೀಳಿಗೆಗೆ ಈ ವಿಚಾರವಾಗಿ ಅರಿವು ಮೂಡಿಸಬೇಕು. ನಮ್ಮ ರಕ್ಷಣೆ ಮಾಡುತ್ತಿರುವ ಸಂವಿಧಾನ ಬದಲಿಸಲು ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಆದರೆ ನಮ್ಮ ನಿಮ್ಮೆಲ್ಲರ ಗಟ್ಟಿತನ, ಅಂಬೇಡ್ಕರ್ ಅವರ ವಾದ, ಗಾಂಧಿ, ನೆಹರೂ, ಸರ್ದಾರ್ ಪಟೇಲರು ಹಾಕಿರುವ ಭದ್ರ ಬುನಾದಿ ಮೂಲಕ ಅದನ್ನು ಉಳಿಸಿಕೊಂಡು ಬಂದಿದ್ದೇವೆ ಎಂದರು.
ಎಲ್ಲಾ ರಾಜ್ಯಗಳಲ್ಲಿ ಸ್ಥಳೀಯ ಭಾಷೆಗಳ ಮೇಲೆ ಒಂದು ಭಾಷೆಯನ್ನು ಹೇರಬೇಕು ಎಂಬ ಪ್ರಯತ್ನ ನಡೆಯುತ್ತಿದೆ. ಅದಕ್ಕೆ ನಾವು ಯಾವುದೇ ಅವಕಾಶ ನೀಡುತ್ತಿಲ್ಲ. ನಮ್ಮ ನೋಟು ನೋಡಿ, ಅದರಲ್ಲಿ ವಿವಿಧ ಪ್ರಾಂತೀಯ ಭಾಷೆಗಳಿದ್ದು, ಆ ಪೈಕಿ ಕನ್ನಡವೂ ಒಂದು ಎಂದರು.
ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ನಾವು ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಬೇಕು. ಭಾರತ ಜೋಡೋ ಯಾತ್ರೆಯಲ್ಲಿ ಭ್ರಾತೃತ್ವ, ಕೋಮು ಸೌಹಾರ್ದತೆ ಪರ, ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಅಸಮಾನತೆ ವಿರುದ್ಧ ಹೋರಾಡುವ ಸಂದೇಶಗಳನ್ನು ನೀಡಿದ್ದಾರೆ. ಈ ಸಂದೇಶಗಳನ್ನು ರಾಜ್ಯದ ಮೂಲೆ, ಮೂಲೆಗೆ ತಲುಪಿಸಲು ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಐಕ್ಯತೆ, ಸಮಗ್ರತೆ, ಶಾಂತಿಯ ಮರುಸ್ಥಾಪನೆ ಮಾಡಬೇಕು ಎಂದು ತಿಳಿಸಿದರು.
ವಿಶ್ವದ ಅನೇಕ ರಾಷ್ಟçಗಳು ನಮ್ಮ ಸಿದ್ಧಾಂತ, ಸಂವಿಧಾನದಿAದ ಪ್ರೇರಣೆ ಪಡೆದಿವೆ. ಹೀಗಾಗಿ ನಮ್ಮ ಸಂವಿಧಾನ ಪ್ರಪಂಚದ ಶ್ರೇಷ್ಠ ಸಂವಿಧಾನವಾಗಿದೆ. ಅದರ ವಿರುದ್ಧ ಸಂಚು ನಡೆಸುತ್ತಿರುವ ಕೋಮುಶಕ್ತಿಗಳನ್ನು ದೂರವಿಡುವುದು ನಮ್ಮ, ನಿಮ್ಮೆಲ್ಲರ ಜವಾಬ್ದಾರಿ ಎಂದರು.
ಮತದಾರರಿಗೆ 6ಸಾವಿರ ರೂ. ಕೊಡುವುದಾಗಿ ಬಹಿರಂಗವಾಗಿಯೇ ಹೇಳಿದ್ದಾರೆ. ಇಡಿ ಐಟಿಯವರಿಗೆ ಬಿಜೆಪಿ ನಾಯಕರು ಕಾಣವುದಿಲ್ಲವೇ..? ಬರೀ ವಿರೋಧ ಪಕ್ಷಗಳು ಮಾತ್ರನಾ ಕಾಣೋದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.
ಒಂದು ಮತಕ್ಕೆ 6 ಸಾವಿರ ಕೊಡುವುದಾಗಿ ಹೇಳಿದ್ದಾರೆ. ಬಿಜೆಪಿಯವರನ್ನ ಚುನಾವಣೆಯಿಂದ ಬ್ಯಾನ್ ಮಾಡಬೇಕು. ಇಡಿ ಐಡಿ ಅಧಿಕಾರಿಗಳಿಗೆ ಬಿಜೆಪಿ ನಾಯಕರು ಕಾಣವುದಿಲ್ಲವೇ..? ಬರೀ ವಿರೋಧ ಪಕ್ಷಗಳು ಕಾಂಗ್ರೆಸ್ ಪಕ್ಷ ಮಾತ್ರನಾ ಕಾಣೋದು. ನಮಗೆ ಚಿತ್ರಹಿಂಸೆ ಕೊಡುವುದಕ್ಕೆ ಮಾತ್ರ ಇಡಿ ಐಟಿ ಇದೆ. ಚಿತ್ರಹಿಂಸೆ ಬಗ್ಗೆ ಮುಂದಿನ ದಿನಗಳಲ್ಲಿ ಪಟ್ಟಿ ಬಿಡುಗಡೆ ಮಾಡುವೆ ಎಂದು ತಿಳಿಸಿದರು.