ಹೊಸದಿಗಂತ ಡಿಜಿಟಲ್ ಡೆಸ್ಕ್:
ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಉಡುಗೊರೆಯನ್ನು ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ. ಈ ವರ್ಷ ಜಿಎಸ್ಟಿ ಸುಧಾರಣೆಗಳನ್ನು ಜಾರಿಗೆ ತರುವುದಾಗಿ ತಿಳಿಸಿದ್ದಾರೆ.
ತೆರಿಗೆ ಸ್ಲ್ಯಾಬ್ಗಳನ್ನು ತರ್ಕಬದ್ಧಗೊಳಿಸುವುದು ಮತ್ತು ಅಗತ್ಯ ಮತ್ತು ದಿನನಿತ್ಯದ ವಸ್ತುಗಳ ಮೇಲಿನ ಜಿಎಸ್ಟಿ ದರಗಳನ್ನು ಕಡಿಮೆ ಮಾಡುವುದರ ಮೇಲೆ ಕೇಂದ್ರೀಕರಿಸಲಾಗುತ್ತದೆ. ಈ ದೀಪಾವಳಿಯ ಹೊತ್ತಿಗೆ, ನೀವು ಸಾಮಾನ್ಯ ಜನರಿಗೆ ಜೀವನವನ್ನು ಸುಲಭಗೊಳಿಸುವ ಮತ್ತು ನಮ್ಮ ಆರ್ಥಿಕತೆಯನ್ನು ಬಲಪಡಿಸುವ ಹೊಸ, ಸರಳೀಕೃತ ಜಿಎಸ್ಟಿ ರಚನೆಯನ್ನು ನೀವು ಕಾಣುತ್ತೀರಿ ಈ ಬದಲಾವಣೆಗಳು ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದ್ದಾರೆ.