May 15, 2026
Friday, May 15, 2026
spot_img

ಸಂಗೀತದ ಬಹುದೊಡ್ಡ ಕೊಂಡಿ ಕಳಚಿದಂತಾಗಿದೆ: ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿರಿಯ ಗಾಯಕಿ ಆಶಾ ಭೋಸ್ಲೆ ಅವರ ನಿಧನದಿಂದ ಹಳೆಯ ಮತ್ತು ಹೊಸ ತಲೆಮಾರಿನ ಸಂಗೀತದ ನಡುವಿನ ಕೊಂಡಿ ಕಳಚಿದಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಕಳೆದ ಹಲವು ದಶಕಗಳಿಂದ ಸುಮಾರು 12,000ಕ್ಕೂ ಅಧಿಕ ಹಾಡುಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ ಸ್ವರ ಸಾಮ್ರಾಜ್ಞಿಯನ್ನು ಕಳೆದುಕೊಂಡು ಚಿತ್ರರಂಗ ಬಡವಾಗಿದೆ.

ತಮ್ಮ ಸುಮಧುರ ಧ್ವನಿ, ಸರಳ ನಡೆ ನುಡಿ, ವಾತ್ಸಲ್ಯ ತುಂಬಿದ ಮಾತುಗಳಿಂದ ಅವರು ಜನಮಾನಸದಲ್ಲಿ ಶಾಶ್ವತ. ಆಶಾ ಭೋಸ್ಲೆಯವರ ನಿಧನದಿಂದ ಹಳೆಯ ಮತ್ತು ಹೊಸ ತಲೆಮಾರಿನ ಸಂಗೀತದ ಬಹುದೊಡ್ಡ ಕೊಂಡಿಯೊಂದು ಕಳಚಿದಂತಾಗಿದೆ.ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಬಂಧು ಮಿತ್ರರು ಹಾಗೂ ಅಭಿಮಾನಿ ಬಳಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !