ಹೊಸದಿಗಂತ ವರದಿ ಉಡುಪಿ:
ಹೆದ್ದಾರಿ ವಿಭಾಜಕಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ನಸುಕಿನ ಜಾವ ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಮೃತ ಯುವಕ ಹಿರಿಯಡ್ಕದ ನಿವಾಸಿ ಅಕ್ಷಯ ಭಟ್ (26) ಎಂದು ಗುರುತಿಸಲಾಗಿದೆ. ಯುವಕ ಅವಿಹಾಹಿತನಾಗಿದ್ದು, ಅಡುಗೆ ವೃತ್ತಿ ಮಾಡಿಕೊಂಡಿದ್ದರು. ಇಂದ್ರಾಳಿಯ ದೇವಸ್ಥಾನವೊಂದರಲ್ಲಿ ನವರಾತ್ರಿಯ ಸಾರ್ವಜನಿಕ ಅನ್ನಸಂತರ್ಪಣೆ ಅಡುಗೆ ಕೆಲಸ ನಿರ್ವಹಿಸಲು ಮನೆಯಿಂದ ಬರುವ ಸಮಯ ಈ ದುರ್ಘಟನೆ ನಡೆದಿದೆ.
ಮಣಿಪಾಲ ಠಾಣಾ ಪೋಲಿಸರು ಘಟನಾ ಸ್ಥಳಕ್ಕೆ ಬಂದು ಕಾನೂನು ಪ್ರಕ್ರಿಯೆ ನಡೆಸಿದ್ದು, ಮೃತದೇಹವನ್ನು ಕೆ.ಎಂ.ಸಿ ಆಸ್ಪತ್ರೆಗೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ನೆರವಾಗಿದ್ದಾರೆ.