January20, 2026
Tuesday, January 20, 2026
spot_img

ಕೋಟ್ಯಾಧಿಪತಿಯಾದ ರಾಯರು… ದಾಖಲೆಯ ಕಾಣಿಕೆ ಸಂಗ್ರಹ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿಂದು 21 ದಿನದಲ್ಲಿ 3.06 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.

ನವೆಂಬರ್ ಹಾಗೂ ಡಿಸೆಂಬರ್ ತಿಂಗಳಿನ 21 ದಿನದ ಹುಂಡಿ ಎಣಿಕೆಯಲ್ಲಿ 3,6,81,661 ರೂ. ಕಾಣಿಕೆ ಹರಿದುಬಂದಿದೆ. ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಎರಡು ತಿಂಗಳಲ್ಲಿ ಕೋಟ್ಯಂತರ ರೂಪಾಯಿ ಕಾಣಿಕೆ ಸಂಗ್ರಹವಾಗಿದ್ದು, ಕಾಣಿಕೆಯಲ್ಲಿ 2,97,44,661 ರೂ. ಕರೆನ್ಸಿ ನೋಟುಗಳು ಹಾಗೂ 9,37,000 ರೂ. ನಾಣ್ಯಗಳು ಸಂಗ್ರಹವಾಗಿವೆ.

23 ಗ್ರಾಂ ಚಿನ್ನ, 490 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ. ಮಂತ್ರಾಲಯ ರಾಯರ ಮಠದಲ್ಲಿ ನಡೆಸಲಾದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಕರ ಸೇವಕರು ಭಾಗವಹಿಸಿದ್ದರು.

Must Read