ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಆಗಲು ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದಿದೆ.
ಅದೃಷ್ಟವಶಾತ್ ಯಾವುದೇ ಸಮಸ್ಯೆ ಎದುರಾಗದೇ ಭಾರೀ ದುರಂತ ತಪ್ಪಿದೆ. ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನ ಟ್ಯಾಕ್ಸಿ ವೇ ದಾಟಿ ರನ್‌ವೇನಲ್ಲಿ ತೆರಳುತ್ತಿತ್ತು.
ಹೀಗಿರುವಾಗ ಏಕಾಏಕಿ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿಯಾಗಿದೆ. ತಕ್ಷಣ ಪೈಲಟ್ ಎಟಿಸಿಗೆ ಮಾಹಿತಿ ನೀಡಿದ್ದು, ಟೇಕಾಫ್ ಕ್ಯಾನ್ಸಲ್ ಮಾಡಲಾಗಿದೆ. ಪ್ರಯಾಣಿಕರನ್ನು ಇಳಿಸಿ ವಿಮಾನ ತಪಾಸಣೆ ಮಾಡಲಾಗುತ್ತಿದೆ. ಮತ್ತೊಂದು ವಿಮಾನದಲ್ಲಿ ಪ್ರಯಾಣಿಕರನ್ನು ದುಬೈಗೆ ಕಳಿಸುವ ವ್ಯವಸ್ಥೆ ಮಾಡಲಾಗುತ್ತಿದೆ.