ಬಿಜೆಪಿ ಮನೆಯೊಂದು ಮೂರು ಬಾಗಿಲು ಆಗಿದೆ: ಶಾಸಕ ಲಕ್ಷ್ಮಣ ಸವದಿ

ದಿಗಂತ ವರದಿ ವಿಜಯಪುರ:

ಬಿಜೆಪಿ ಮನೆಯೊಂದು ಮೂರು ಬಾಗಿಲು ಆಗಿದೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ದೂರಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಭವಿಷ್ಯ ಇಲ್ಲ. ಹೀಗಾಗಿ ನಾನು ಅರ್ಥ ಮಾಡಿಕೊಂಡು ಬಿಜೆಪಿಯ ಮನೆ ಬಿಟ್ಟು ಹೊರಗಡೆ ಬಂದಿದ್ದೇನೆ ಎಂದರು.

ಬಿಜೆಪಿಯಲ್ಲಿ ಆಂತರಿಕ ಕಲಹ ಬಹಳ ಇದೆ. ರಾಜ್ಯದ ಜನತೆ ಬಿಜೆಪಿ ಪಕ್ಷವನ್ನು ನೋಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್‌ಗೆ ಆಶೀರ್ವಾದ ಮಾಡುತ್ತಾರೆ ಎಂದರು.

ಮುಂದಿನ 20 ವರ್ಷ ಬಿಜೆಪಿ ವಿರೋಧ ಪಕ್ಷದಲ್ಲಿ ಇರುತ್ತದೆ. ಹೀಗಾಗಿ ಕಾಂಗ್ರೆಸ್‌ಗೆ ಜನತೆ ಆಶೀರ್ವಾದ ಮಾಡುತ್ತಾರೆ. ನೋಡ್ತಾ ಇರಿ, ನಾವು ಇರ್ತಿವಿ, ನೀವು ಇರ್ತಿರಿ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!