ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವ ಶರಣಪ್ರಕಾಶ್ ಪಾಟೀಲ್ ಹೆಸರು ಹೇಳಿ ಬಿಜೆಪಿ ಕಾರ್ಯಕರ್ತರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಲಬುರಗಿಯ ಚಿಂಚೊಳ್ಳಿ ತಾಲೂಕಿನ ಶಿರೋಳ್ಳಿ ಗ್ರಾಮದ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ನನ್ನ ಸಾವಿಗೆ ಶರಣಪ್ರಕಾಶ್ ಪಾಟೀಲ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರೇ ಕಾರಣ ಎಂದು ಆಡಿಯೋ ರೆಕಾರ್ಟ್ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ನಾನು ಹಿಂದೂ ಹುಲಿಯಾಗಿ ಹುಟ್ಟಿದ್ದೇನೆ, ಹಿಂದೂ ಹುಲಿಯಾಗಿ ಸಾಯುತ್ತೀನಿ ಎಂದು ರೆಕಾರ್ಡ್‌ನಲ್ಲಿ ಇದೆ ಎನ್ನಲಾಗಿದೆ. ಬಿಜೆಪಿ ನಾಯಕರು ಈ ಬಗ್ಗೆ ಮಾತನಾಡಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು, ಸಚಿವರ ಹೆಸರು ಪ್ರಸ್ತಾಪವಾಗಿದೆ ಸೂಕ್ತ ತನಿಖೆಯಾಗಲಿ ಎಂದು ಹೇಳಿದ್ದಾರೆ.