ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಪ್ರತಿಷ್ಠಿತ ಶಾಂಗ್ರಿಲಾ ಹೊಟೇಲ್ಗೆ ಬೆದರಿಕೆ ಇ-ಮೇಲ್ ಬಂದಿದೆ.
ಹೊಟೇಲ್ನಲ್ಲಿ ಬಾಂಬ್ ಇಡಲಾಗಿದೆ ಎನ್ನುವ ಇ-ಮೇಲ್ ಬಂದಿದ್ದು, ತಕ್ಷಣವೇ ಸಿಬ್ಬಂದಿ ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.
[email protected] ಎಂಬ ಮೇಲ್ ಐಡಿ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಇದು ಫೇಕ್ ಸಂದೇಶ ಇರಬಹುದು ಎನ್ನುವ ಶಂಕೆಯಿದೆ. ಆದರೆ ಮೇಲ್ ಕಳಿಸಿದ್ದು ಯಾರು ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.