September 26, 2026
Saturday, September 26, 2026
spot_img

ಮಡಿಕೇರಿ ಜಿಲ್ಲಾ ನ್ಯಾಯಾಲಯಕ್ಕೂ ಬಂತು ಬಾಂಬ್ ಬೆದರಿಕೆ ಸಂದೇಶ!

ಹೊಸದಿಗಂತ ವರದಿ ಮಡಿಕೇರಿ:

ಮಡಿಕೇರಿ ಜಿಲ್ಲಾ ನ್ಯಾಯಾಲಯಕ್ಕೆ‌ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ನ್ಯಾಯಾಲಯದ ಆವರಣದಲ್ಲಿ ಆತಂಕ ಸೃಷ್ಟಿಯಾಗಿತ್ತು.

ಇಲ್ಲಿನ ವಿದ್ಯಾನಗರದಲ್ಲಿರುವ ಕೋರ್ಟ್’ನಲ್ಲಿ ಬಾಂಬ್ ಇಡಲಾಗಿದೆ. ಮಧ್ಯಾಹ್ನದ ವೇಳೆಗೆ ಸ್ಫೋಟಗೊಳ್ಳಲಿದೆ ಎಂದು ಉಲ್ಲೇಖಿಸಿ ಕಿಡಿಗೇಡಿಗಳು ಇ-ಮೇಲ್ ಮೂಲಕ ಸಂದೇಶ ಕಳುಹಿಸಿದ್ದರೆನ್ನಲಾಗಿದೆ.

ಇದನ್ನೂ ಓದಿ:

ವಿಷಯ ತಿಳಿಯುತ್ತಿದ್ದಂತೆ ಕೋರ್ಟ್ ಕಲಾಪ ಸ್ಥಗಿತಗೊಳಿಸಿ ನ್ಯಾಯಾಧೀಶರು, ವಕೀಲರು ಮತ್ತು ಸಿಬ್ಬಂದಿ ಹೊರ ಬಂದಿದ್ದು, ಪೊಲೀಸರು ಬಾಂಬ್ ಪತ್ತೆ ದಳದ ಮೂಲಕ ಪರಿಶೀಲನೆ ನಡೆಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಇದೊಂದು ಸುಳ್ಳು ಬೆದರಿಕೆ ಸಂದೇಶ ಎಂದು ಕಂಡು ಬಂದಿದ್ದು, ಆದರೂ, ನ್ಯಾಯಾಲಯವನ್ನು ಖಾಲಿ ಮಾಡಿಸಿ, ಸ್ಫೋಟಕ ಪತ್ತೆ ದಳ ಹಾಗೂ ಪೊಲೀಸರ ತಂಡ ತೀವ್ರ ಶೋಧ ನಡೆಸಿದ್ದಾರೆ.

Must Read