ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಚ್ಚಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿ ತಪಾಸಣೆ ಕಾರ್ಯ ನಡೆಸಲಾಗಿದೆ.
ಇಂಡಿಗೋ ವಿಮಾನ ಸಂಖ್ಯೆ 6E6482ರಲ್ಲಿ ಬಾಂಬ್ ಇರಿಸಲಾಗಿದೆ ಎಂದು ಇಂದು ಬೆಳಗ್ಗೆ 10.30ಕ್ಕೆ ಬೆದರಿಕೆ ಕರೆ ಬಂದಿದೆ. ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿ ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ಯಲಾಗಿದೆ. ಕೂಡಲೇ ತಪಾಸಣಾಧಿಕಾರಿಗಳು ಸ್ಥಳಕ್ಕೆ ತೆರಳಿ ವಿಮಾನವನ್ನು ಸಂಪೂರ್ಣವಾಗಿ ತಪಾಸಣೆ ನಡೆಸಿದ್ದಾರೆ.
ಪ್ರಾಥಮಿಕ ತನಿಖೆಯ ನಂತರವೇ ಹೆಚ್ಚಿನ ವಿವರಗಳು ಲಭ್ಯವಾಗಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.