ಕೇರಳ ಸಿಪಿಐ (ಎಂ) ರಾಜ್ಯ ಪ್ರಧಾನ ಕಚೇರಿ ಮೇಲೆ ಆಗಂತುಕನಿಂದ ಸ್ಪೋಟಕ ಎಸೆತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳ ಸಿಪಿಐ (ಎಂ) ರಾಜ್ಯ ಪ್ರಧಾನ ಕಚೇರಿ ಮೇಲೆ ಬೈಕ್‌ನಲ್ಲಿ ಬಂದಿದ್ದ ಆಗಂತುಕನೋರ್ವ ಸ್ಪೋಟಕ ಎಸೆದುಹೋಗಿದ್ದು, ಘಟನೆ ರಾಜ್ಯದಲ್ಲಿ ಉದ್ವಿಗ್ನತೆಗೆ ಕಾರಣವಾಗಿದೆ. ಪೊಲೀಸ್ ಇಲಾಖೆ ಮಾಹಿತಿಗಳ ಪ್ರಕಾರ ರಾತ್ರಿ 11.30ರ ಸುಮಾರಿಗೆ ಬೈಕಿನಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿಯೊಬ್ಬ ನಗರದ ಹೃದಯಭಾಗದಲ್ಲಿರುವ ಎಕೆಜಿ ಸೆಂಟರ್ ಮೇಲೆ ಸೋಟಕ ಎಸೆದಿದ್ದಾನೆ.

ಈ ಮಾಹಿತಿ ಸಿಗುತ್ತಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರೀಯ ದಳ ಧಾವಿಸಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಘಟನಾ ಸ್ಥಳ ಮತ್ತು ಸಿಸಿಟಿವಿ ಪರಿಶೀಲನೆ ನಡೆಸಲಾಗುತ್ತಿದೆ. ಈ ನಡುವೆ ಎಕೆಜಿ ಸೆಂಟರ್‌ನ ಅಧಿಕೃತ ಮಾಧ್ಯಮ ಗುಂಪಿನ ಮೂಲಕ ಸಿಪಿಐ (ಎಂ) ದೃಶ್ಯವೊಂದನ್ನು ಬಿಡುಗಡೆ ಮಾಡಿದ್ದು, ಈ ದೃಶ್ಯಗಳಲ್ಲಿ, ವ್ಯಕ್ತಿಯೊಬ್ಬ ಮೋಟಾರ್ ಬೈಕ್‌ನಲ್ಲಿ ಸ್ಥಳಕ್ಕೆ ಆಗಮಿಸಿ ಕಟ್ಟಡದ ಮೇಲೆ ಸೋಟಕ ಎಸೆದು ಸ್ಥಳದಿಂದ ಪರಾರಿಯಾಗುತ್ತಿರುವುದು ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!