BOMB THREAT | ಕ್ಲಾಸ್‌ರೂಮ್‌ ಒಳಗೆ ಬಾಂಬ್‌ ಇಟ್ಟಿದ್ದೇವೆ, ಬೆಂಗಳೂರಿನ ಶಾಲೆಗೆ ಬಾಂಬ್‌ ಬೆದರಿಕೆ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಶಾಲೆಯೊಂದಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್‌ ತಾಲೂಕಿನ ಹುಲಿಮಂಗಲ ಸಮೀಪದ ಟ್ರೇಮಿಸ್‌ ವರ್ಲ್ಡ್‌ ಸ್ಕೂಲ್‌ಗೆ ಬೆದರಿಕೆ ಕರೆ ಬಂದಿದ್ದು, ಕ್ಲಾಸ್‌ರೂಮ್‌ ಒಂದರಲ್ಲಿ ಬಾಂಬ್‌ ಇಟ್ಟಿದ್ದೇವೆ ಎಂದು ಹೇಳಿದ್ದಾರೆ.

ಡೆಸ್ಕ್‌ ಕೆಳಗಡೆ ಬಾಂಬ್‌ ಇಟ್ಟಿದ್ದೇವೆ ಎಂದು ಶಾಲಾ ವೆಬ್‌ಸೈಟ್‌ಗೆ ಮೇಲ್‌ ಬಂದಿದೆ. ತಕ್ಷಣ ಶಾಲಾ ಆಡಳಿತ ಮಂಡಳಿ ಪೊಲೀಸರಿಗೆ ಕರೆ ಮಾಡಿದೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾಂಬ್‌ ಸ್ಕ್ವಾಡ್‌ ಹಾಗೂ ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ. ಇದು ಹುಸಿಬಾಂಬ್‌ ಕರೆಯಾ ಎನ್ನುವ ಬಗ್ಗೆ ಪೊಲೀಸರು ಗಮನ ಹರಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!