ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಗ್ರಾಮದಲ್ಲಿ ಕೃಷಿಹೊಂಡದಲ್ಲಿ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ವೀರೇಶ್ (13) ಮೃತ ಬಾಲಕ. ನೀರು ಕುಡಿಯಲು ಹೋಗಿ ಆಯತಪ್ಪಿ ಕೃಷಿಹೊಂಡಕ್ಕೆ ಬಿದ್ದು ವೀರೇಶ್ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಬಾಲಕನ ಮೃತದೇಹವನ್ನು ಕೃಷಿ ಹೊಂಡದಿಂದ ಹೊರತೆಗೆದಿದ್ದು. ಘಟನೆ ಸಂಬಂಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.