SHOCKING | ಸ್ಕೂಲ್‌ ಬಸ್‌ನಲ್ಲಿ ಸೀಟ್‌ಗಾಗಿ ಹುಡುಗರ ಮಧ್ಯೆ ಜಗಳ, ಓರ್ವ ಬಾಲಕ ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಸಣ್ಣ ಜಗಳ ದುರಂತ ತಿರುವು ಪಡೆದುಕೊಂಡು 14 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾನೆ.

9 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಾದ ಸರವಣನ್ ಮತ್ತು ಕಂದಗುರು ನಡುವೆ ಶಾಲಾ ಬಸ್ಸಿನಲ್ಲಿ ಸೀಟಿನ ಕುರಿತು ಜಗಳ ನಡೆದಿತ್ತು. ಈ ಜಗಳ ತಾರಕಕ್ಕೇರಿತು, ಮತ್ತು ಆ ಕ್ಷಣದಲ್ಲಿ ಸರವಣನ್ ಕಂದಗುರುವನ್ನು ತಳ್ಳಿದ ಪರಿಣಾಮ ಆತ ಬಿದ್ದು ತಲೆಗೆ ಪೆಟ್ಟು ಬಿದ್ದಿತ್ತು ಎಂದು ಹೇಳಲಾಗಿದೆ. ವೈದ್ಯಕೀಯ ಚಿಕಿತ್ಸೆಗಾಗಿ ಸಾಗಿಸಲಾಯಿತಾದರೂ, ಗುರುವಾರ ಬೆಳಗ್ಗೆ ಕಂದಗುರು ಮೃತಪಟ್ಟಿದ್ದಾರೆ.

ಘಟನೆಯ ನಂತರ, ಸೇಲಂ ಪೊಲೀಸರು ಸರವಣನ್​ನ್ನು ವಶಕ್ಕೆ ಪಡೆದಿದ್ದಾರೆ, ಮುಂದಿನ ಕಾನೂನು ಕ್ರಮಗಳಿಗಾಗಿ ಆತನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ದೃಢಪಡಿಸಿದರು. ವಾಗ್ವಾದಕ್ಕೆ ಕಾರಣವಾದ ಸಂದರ್ಭಗಳ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!