Monday, December 22, 2025

SHOCKING | ಪಾರಿವಾಳ ನೋಡೋಕೆ ಹೋಗಿ ಮೊದಲನೇ ಮಹಡಿಯಿಂದ ಬಿದ್ದ ಬಾಲಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

 ಪಾರಿವಾಳ ನೋಡಲು ಹೋಗಿ ಆಯತಪ್ಪಿ ಬಿದ್ದು ಬಾಲಕನೋರ್ವ ಮೊದಲನೇ ಮಹಡಿಯಿಂದ ಬಿದ್ದು ಗಾಯಗೊಂಡಿರುವ ಘಟನೆ ಕೊಪ್ಪಳದ ಹಮಾಲರ ಕಾಲೋನಿಯಲ್ಲಿ ನಡೆದಿದೆ.

ಗಾಯಗೊಂಡ ಬಾಲಕನನ್ನು ಹಮಾಲರ ಕಾಲೋನಿಯ ಅಬ್ಬಾಸ ಅಲಿ ಅವರ ಮಗ ಮಹ್ಮದ್ ಹ್ಯಾರಿಸ್ (6) ಎಂದು ಗುರುತಿಸಲಾಗಿದೆ.

ಮೊದಲನೇ ಮಹಡಿಯಲ್ಲಿ ಬಾಲಕ ಆಟವಾಡುತ್ತಿದ್ದ. ಈ ವೇಳೆ ಪಾರಿವಾಳವನ್ನು ನೋಡಿ, ಅದನ್ನು ಹಿಡಿಯಲು ಮುಂದಾಗಿದ್ದಾನೆ. ಈ ವೇಳೆ ಮಹಡಿಯ ಗ್ರಿಲ್ ಬಳಿ ನಿಂತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಪರಿಣಾಮ ತಲೆಗೆ ಪೆಟ್ಟುಬಿದ್ದಿದ್ದು, ಕೂಡಲೇ ಪೋಷಕರು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನೂ ಬಾಲಕ ಕೆಳಗೆ ಬೀಳುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸದ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಲೆಗೆ ಪಟ್ಟಾಗಿದೆ, ಯಾವುದೇ ಪ್ರಾಣಾಪಾಯ ಇಲ್ಲ ಎಂದ ಕುಟುಂಬಸ್ಥರು ತಿಳಿಸಿದ್ದಾರೆ. ಕೊಪ್ಪಳದ ನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

error: Content is protected !!