October 11, 2026
Sunday, October 11, 2026
spot_img

SHOCKING | ಮನೆ ಮುಂದೆ ಆಟ ಆಡುತ್ತಿದ್ದ ಮಗು ಹಾವು ಕಚ್ಚಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಹಾವು ಕಚ್ಚಿ ಎರಡೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಸಾಗರದ ಎಸ್.ಎನ್. ನಗರದಲ್ಲಿ ನಡೆದಿದೆ.

ಗಣೇಶ್ ಎಂಬುವವರ ಪುತ್ರ ಭವಿನ್ ಮೃತ ಬಾಲಕ. ರಜೆಯ ಹಿನ್ನೆಲೆ ಭವಿನ್ ಅಜ್ಜಿ ಮನೆಗೆ ಬಂದಿದ್ದ.‌ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕನ ಕೈಗೆ ನಾಗರಹಾವು ಕಚ್ಚಿದೆ ಎನ್ನಲಾಗಿದೆ.

ತಕ್ಷಣವೇ ಮಗುವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಗು ಕೊನೆಯುಸಿರೆಳೆದಿದೆ.

Must Read