March 23, 2026
Monday, March 23, 2026
spot_img

ಸೈಕಲ್ ತುಳಿಯುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆನಗಳೂರಿನ ಗಿರಿನಗರದ ಮೊದಲನೇ ಮುಖ್ಯ ರಸ್ತೆಯಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಮನೆಯ ಮುಂದೆಯೇ ಸೈಕಲ್ ಸವಾರಿ ಮಾಡುತ್ತಿದ್ದ ವಿಕಾಸ್ ಎಂಬ ಬಾಲಕನಿಗೆ ವೇಗವಾಗಿ ಬಂದ ಮಹೀಂದ್ರಾ XUV300 ಕಾರು ಡಿಕ್ಕಿ ಹೊಡೆದಿದೆ.

ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಮಹೀಂದ್ರಾ XUV300 ಕಾರನ್ನು ಚಾಲಕನು ಏಕಾಏಕಿ ರಸ್ತೆಗಿಳಿಸಲು ಪ್ರಯತ್ನಿಸಿದ್ದಾನೆ. ಅದೇ ಸಮಯದಲ್ಲಿ ಬಾಲಕ ವಿಕಾಸ್ ತನ್ನ ಸೈಕಲ್‌ನಲ್ಲಿ ಅಲ್ಲಿಗೆ ಬಂದಿದ್ದಾನೆ. ಚಾಲಕನ ಅಜಾಗರೂಕತೆಯಿಂದಾಗಿ ಕಾರು ನೇರವಾಗಿ ಬಾಲಕನಿಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ:

ಈ ಭೀಕರ ಅಪಘಾತದ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿವೆ. ಅಪಘಾತದಲ್ಲಿ ಗಾಯಗೊಂಡ ಬಾಲಕನನ್ನು ತಕ್ಷಣವೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಮುಂದುವರಿದಿದೆ. ಬನಶಂಕರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !