ಹೊಸದಿಗಂತ ಡಿಜಿಟಲ್ ಡೆಸ್ಕ್:
ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕನ ಮೇಲೆ ಕಾರು ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಅಗಸ್ತ್ಯ ಕನಮಡಿ (10) ಮೃತ ದುರ್ದೈವಿ ಬಾಲಕ. ಮೃತ ಬಾಲಕ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ. ಈ ವೇಳೆ ಕಾರೊಂದು ಬಾಲಕನ ಮೇಲೆ ಹರಿದು ಹೋಗಿದೆ. ಪರಿಣಾಮ ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಅಪಘಾತದ ಬಳಿಕ ಕಾರು ಚಾಲಕ ಪರಾರಿಯಾಗಿದ್ದು, ಆರೋಪಿ ರಾಹುಲ್ ನನ್ನು ಪೊಲೀಸರು ಬಂಧಿಸಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.