ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುಗಾದಿ ಹಬ್ಬದ ಹಿನ್ನೆಲೆ ಪುಣ್ಯಸ್ನಾನಕ್ಕೆ ತೆರಳಿದ್ದ ಬಾಲಕ ತ್ರಿವೇಣಿ ಸಂಗಮದ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಟಿ ನರಸೀಪುರ ತಾಲೂಕಿನಲ್ಲಿ ನಡೆದಿದೆ.
ಮೃತ ಬಾಲಕನನ್ನು ಶರಣ್ (13) ಎಂದು ಗುರುತಿಸಲಾಗಿದೆ. ಬಾಲಕನ ಸಾವಿನಿಂದ ಫೋಷಕರ ಆಕ್ರಂದನ ಮಗಿಲು ಮುಟ್ಟಿದ್ದು, ಸ್ನೇಹಿತರ ಜೊತೆ ಪುಣ್ಯಸ್ನಾನಕ್ಕೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.