Friday, June 9, 2023

Latest Posts

ಟ್ಯೂಷನ್‌ಗೆ ತೆರಳಿದ್ದ ಬಾಲಕ ನದಿಯಲ್ಲಿ ಶವವಾಗಿ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಟ್ಯೂಷನ್‌ಗೆಂದು ತೆರಳಿ ನಾಪತ್ತೆಯಾಗಿದ್ದ ಹತ್ತನೇ ತರಗತಿಯ ಬಾಲಕನ ಮೃತದೇಹವು ಕುಮಾರಧಾರಾ ನದಿಯ ನಾಕೂರು ಗಯ ಎಂಬಲ್ಲಿ ಗುರುವಾರದಂದು ಪತ್ತೆಯಾಗಿದೆ.

ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಂಜುನಾಥ ಶೆಟ್ಟಿ ಅವರ ಪುತ್ರ, ಕಡಬದ ಖಾಸಗಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ಅದ್ವೈತ್ ಶೆಟ್ಟಿ (15) ಎಂಬಾತ ಬುಧವಾರದಂದು ಟ್ಯೂಷನ್ ಗೆಂದು ತೆರಳಿ ಆ ಬಳಿಕ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದಾನೆ.

ಮನೆಯವರು ಹಾಗೂ ಸ್ಥಳೀಯರು ಹುಡುಕಾಡಿದಾಗ ಬಾಲಕನ ಬ್ಯಾಗ್ ಹಾಗೂ ಐಡಿ ಕಾರ್ಡ್ ಕುಮಾರಧಾರ ನದಿಯ ತಟದಲ್ಲಿ ನಾಕೂರು ಗಯ ಎಂಬಲ್ಲಿ ಕಂಡುಬಂದಿದ್ದು, ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹುಡುಕಾಡಿದಾಗ ಮೃತದೇಹವು ಪತ್ತೆಯಾಗಿದೆ. ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಯ ಭಯದಿಂದ ಬಾಲಕ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!