ಈಜಲು ಹೋಗಿದ್ದ ಬಾಲಕ ಮುಲ್ಲಾಮಾರಿ ಜಲಾಶಯದಲ್ಲಿ ಮುಳುಗಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಲ್ಲಾಮಾರಿ ಜಲಾಶಯದಲ್ಲಿ ಈಜಲು ಹೋಗಿ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಖೇರ್ಡಾ ಬಿ ಗ್ರಾಮದಲ್ಲಿ ನಡೆದಿದೆ.

15 ವರ್ಷದ ಮುಜಾಬೀಲ್ ಕಾಜೋದ್ದಿನ್ ಮೃತಪಟ್ಟ ದುರ್ದೈವಿ ಬಾಲಕ. ಐವರು ಸ್ನೇಹಿತರೊಂದಿಗೆ ಈಜುತ್ತಿದ್ದ ವೇಳೆ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಬಾಲಕ ಸಸ್ತಾಪುರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮದಲ್ಲಿ ವಾಸವಾಗಿದ್ದಾನೆ. ತಾಯಿ ತಡೋಳ ಗ್ರಾಮಕ್ಕೆ ತೆರಳಿದ್ದಾಗ ಬಾಲಕ ಮುಲ್ಲಾಮಾರಿ ಜಲಾಶಯಕ್ಕೆ ಈಜಲು ತೆರಳಿದ್ದ.

ಈ ವೇಳೆ ಬಾಲಕ ಈಜು ಬಾರದೆ ಮುಲ್ಲಾಮಾರಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬಾಲಕನ ಶವವನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಈ ಕುರಿತು ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!