ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುಟ್ಟ ಕಂದಮ್ಮಗಳ ಮನಸ್ಸೇ ಹಾಗೇ, ತಮಗೆ ಏನಾಗುತ್ತದೆ ಎಂದು ಯೋಚಿಸದೆ ಉಳಿದವರಿಗೆ ಸಹಾಯ ಮಾಡಲು ಇಷ್ಟಪಡುತ್ತಾರೆ. ಇದೇ ರೀತಿ ಪುಟಾಣಿ ಪಾರಿವಾಳದ ಜೀವ ಉಳಿಸಲು ಹೋಗಿ ಬಾಲಕನೊಬ್ಬ ಮೃತಪಟ್ಟಿದ್ದಾನೆ.
ವಿದ್ಯುತ್ ಕಂಬದಲ್ಲಿ ಸಿಲುಕಿದ್ದ ಪಾರಿವಾಳವನ್ನು ರಕ್ಷಿಸಲು ಕಂಬ ಏರಿದ್ದ ಬಾಲಕನಿಗೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಹನುಮಾಪುರ ಗ್ರಾಮದಲ್ಲಿ ನಡೆದಿದೆ.
ರಾಮಚಂದ್ರ (12) ಮೃತ ಬಾಲಕ. ಈತ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಗ್ರಾಮದ ವಿದ್ಯುತ್ ಕಂಬದಲ್ಲಿನ ತಂತಿಗೆ ಪಾರಿವಾಳವೊಂದು ಸಿಲುಕಿ ಜೀವನ್ಮರಣ ಮಧ್ಯೆ ಹೋರಾಡುತ್ತಿರುವುದನ್ನು ಗಮನಿಸಿದ ಈತ ಪಾರಿವಾಳವನ್ನು ರಕ್ಷಿಸಲೆಂದು ವಿದ್ಯುತ್ ಕಂಬ ಏರಿದ್ದ. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.