ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಂದಿನಂತೆ ಶಾಲೆಗೆ ಹೊರಡುತ್ತಿದ್ದ ಬಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಶಿವಮೊಗ್ಗದ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದ 10 ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ಬಾಲಕ. ಶಾಲೆಗೆ ಹೊರಡುತ್ತಿದ್ದ ಜಯಂತ್‌ಗೆ ಇದ್ದಕ್ಕಿದ್ದಂತೆಯೇ ಎದೆನೋವು ಕಾಣಿಸಿದೆ.
ತಕ್ಷಣವೇ ಜಯಂತ್‌ನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಈಗಾಗಲೇ ಬಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.