ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ ಮೇಲೆ ವಿದ್ಯುತ್ ಕಂಬವೊಂದು ಮುರಿದು ಬಿದ್ದ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕಂಬಳಿಪುರ ಗ್ರಾಮದಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕೂಡಲೇ ಪ್ರಯಾಣಿಕರು ಬಸ್ ನಿಂದ ಕೆಳಗೆ ಇಳಿದಿದ್ದಾರೆ. ಅದೃಷ್ಟವಶಾತ್ ಎಲ್ಲಾರು ಅಪಾಯದಿಂದ ಪಾರಾಗಿದ್ದಾರೆ.