ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೆನ್ನೈನಲ್ಲಿ ಮಹಿಳಾ ಟೆಕ್ಕಿಯೊಬ್ಬರು ತಮ್ಮ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಕಟ್ಟಡ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
22 ವರ್ಷದ ಪದ್ಮಪ್ರಿಯಾ ಮಧುರೈ ನಿವಾಸಿ. ತನ್ನ ಗೆಳತಿಯ ಜತೆ ಮೆಟ್ರೋ ಸ್ಟೇಷನ್ ಬಳಿ ಪ್ರಿಯಾ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಏಕಾಏಕಿ ಕಟ್ಟಡ ಕುಸಿದು ಬಿದ್ದಿದೆ. ತಕ್ಷಣವೇ ಸ್ಥಳೀಯರು ಅವರನ್ನು ರಕ್ಷಿಸಲು ಯತ್ನಿಸಿದ್ದಾರೆ.
ಅಗ್ನಿ ಶಾಮಕ ಸಿಬ್ಬಂದಿ ಕೂಡ ಆಗಮಿಸಿದ್ದು, ಅವಶೇಷಗಳಡಿ ಸಿಲುಕಿದ್ದು ಪ್ರಿಯಾರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಕಟ್ಟಡ ಕೆಡವಲು ಬಳಸುತ್ತಿದ್ದ ಯಂತ್ರಗಳ ಭಾರೀ ಕಂಪನದಿಂದ ಗೋಡೆ ಕುಸಿದಿರಬಹುದು ಎನ್ನಲಾಗಿದೆ.