September 19, 2026
Saturday, September 19, 2026
spot_img

ದಸರಾ ಹಬ್ಬಕ್ಕೆ ಶಾಲಾ ಮಕ್ಕಳಿಗೆ ಬಂಪರ್ ಗಿಫ್ಟ್: ಎಷ್ಟು ದಿನ ರಜೆ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಸರಾ ಹಬ್ಬದ ಸಂಭ್ರಮಕ್ಕೆ ಶಾಲಾ ವಿದ್ಯಾರ್ಥಿಗಳಿಗೆ ಈ ಬಾರಿ ಭರ್ಜರಿ ರಜೆ ಸಿಗಲಿದೆ.

ಹೌದು! 2026-27ನೇ ಶೈಕ್ಷಣಿಕ ಸಾಲಿನ ದಸರಾ ರಜೆಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಒಟ್ಟು 19 ದಿನಗಳ ರಜೆ ಸಿಗಲಿದೆ.

ಅಕ್ಟೋಬರ್ 3ರಿಂದ ರಜೆ ಶುರು

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯಂತೆ, ಅಕ್ಟೋಬರ್ 3, 2026ರಿಂದ ದಸರಾ ರಜೆ ಆರಂಭವಾಗಲಿದೆ. ಅಕ್ಟೋಬರ್ 21ರಂದು ವಿಜಯದಶಮಿ ಇರುವ ಹಿನ್ನೆಲೆಯಲ್ಲಿ ಅಂದೇ ರಜೆ ಮುಕ್ತಾಯವಾಗಲಿದ್ದು, ಅಕ್ಟೋಬರ್ 22ರಿಂದ ಶಾಲೆಗಳು ಪುನರಾರಂಭಗೊಳ್ಳಲಿವೆ.

ಇದನ್ನೂ ಓದಿ:

ಏಪ್ರಿಲ್ 11ರಿಂದ ಬೇಸಿಗೆ ರಜೆ

ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, 2026-27ನೇ ಸಾಲಿನ ಎರಡನೇ ಅವಧಿಯು ಅಕ್ಟೋಬರ್ 22, 2026ರಿಂದ ಏಪ್ರಿಲ್ 10, 2027ರವರೆಗೆ ನಡೆಯಲಿದೆ. ಇದರ ಬಳಿಕ ಏಪ್ರಿಲ್ 11, 2027ರಿಂದ ಬೇಸಿಗೆ ರಜೆ ಆರಂಭವಾಗಲಿದೆ.

ಆದರೆ ಸ್ಥಳೀಯ ಹವಾಮಾನ ಪರಿಸ್ಥಿತಿ ಅಥವಾ ಇತರೆ ಅಗತ್ಯಗಳಿಗೆ ಅನುಗುಣವಾಗಿ ರಜೆಯಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡುವ ಅಧಿಕಾರವನ್ನು ಆಯಾ ಜಿಲ್ಲೆಯ ಉಪನಿರ್ದೇಶಕರು ಹೊಂದಿದ್ದಾರೆ. ಅಗತ್ಯವಿದ್ದರೆ ಜಿಲ್ಲಾಮಟ್ಟದಲ್ಲಿ ರಜೆಯ ದಿನಾಂಕಗಳಲ್ಲಿ ಬದಲಾವಣೆ ಮಾಡಬಹುದಾಗಿದೆ.

ಒಟ್ಟಿನಲ್ಲಿ, ದಸರಾ ಹಬ್ಬದ ಸಂದರ್ಭದಲ್ಲಿ ಸಿಗಲಿರುವ 19 ದಿನಗಳ ರಜೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಹಬ್ಬದ ಸಂಭ್ರಮದ ಜೊತೆಗೆ ಪ್ರವಾಸ ಮತ್ತು ಕುಟುಂಬದೊಂದಿಗೆ ಸಮಯ ಕಳೆಯಲು ಉತ್ತಮ ಅವಕಾಶವಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !