ಶಬರಿಮಲೆ ಯಾತ್ರಾರ್ಥಿಗಳ ಬಸ್‌ ಅಪಘಾತ: ಸ್ಥಳದಲ್ಲಿ ಬಿಗುವಿನ ವಾತಾವರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆಂಧ್ರದಿಂದ 44 ಶಬರಿಮಲೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಪಥನಂತಿಟ್ಟದ ಲಾಹಾ ಬಳಿ ಅಪಘಾತಕ್ಕೀಡಾಗಿದೆ. ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 8 ವರ್ಷದ ಬಾಲಕ ಸೇರಿದಂತೆ ಮೂವರನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಆರೋಗ್ಯ ಸಚಿವೆ ವೀಣಾ ಜಾರ್ಜ್ ಸ್ಥಳದಲ್ಲಿ ಬೀಡು ಬಿಟ್ಟಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಇದುವರೆಗೂ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ.

ಇತರ 18 ಜನರನ್ನು ಸ್ಥಳೀಯ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ, ಉಳಿದವರಿಗೆ ನೆರೆಯ ಸಮುದಾಯ ಆರೋಗ್ಯದಲ್ಲಿ ಚಿಕಿತ್ಸೆ ನೀಡಲಾಗಿದೆ. ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ, ಮೋಟಾರು ವಾಹನ ಇಲಾಖೆ ಅಧಿಕಾರಿಗಳು ಮತ್ತು ಸ್ಥಳೀಯರು ಜಂಟಿಯಾಗಿ ಕ್ಷಿಪ್ರ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದು, ಅಪಘಾತದ ತೀವ್ರತೆಯನ್ನು ಕಡಿಮೆ ಮಾಡಿದೆ.

ಸ್ಥಳಕ್ಕಾಗಮಿಸಿದ ಆರೋಗ್ಯ ಸಚಿವೆ ವೀಣಾ ಜಾರ್ಜ್ ರಕ್ಷಣಾ ಕಾರ್ಯಾಚರಣೆ ಹಾಗೂ ಯಾತ್ರಾರ್ಥಿಗಳ ಹೆಚ್ಚಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಿದರು. ಬಳಿಕ ಮಾತನಾಡಿದ ಅವರು, ಗಾಯಗೊಂಡ ಎಲ್ಲರಿಗೂ ಅಗತ್ಯ ಚಿಕಿತ್ಸೆ ನೀಡಲಾಗಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!