ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರ್ಯಾಣದಲ್ಲಿ 40 ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಪಲ್ಟಿಯಾಗಿದ್ದು, ಐವರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಹೇಂದ್ರಗಢ ಜಿಲ್ಲೆಯ ಕನಿನಾ ದಾದ್ರಿ ರಸ್ತೆಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಶಾಲಾ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಈ ಅಪಘಾತದಲ್ಲಿ ಐದು ಮಕ್ಕಳು ಸಾವನ್ನಪ್ಪಿದ್ದಾರೆ. ಇನ್ನೂ ಹತ್ತಾರು ಮಕ್ಕಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.