BIG NEWS | ಹರ್ಯಾಣದಲ್ಲಿ ಶಾಲಾ ಮಕ್ಕಳಿದ್ದ ಬಸ್‌ ಪಲ್ಟಿ, ಐವರು ಮಕ್ಕಳು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹರ್ಯಾಣದಲ್ಲಿ 40 ವಿದ್ಯಾರ್ಥಿಗಳಿದ್ದ ಶಾಲಾ ಬಸ್​ ಪಲ್ಟಿಯಾಗಿದ್ದು, ಐವರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಹೇಂದ್ರಗಢ ಜಿಲ್ಲೆಯ ಕನಿನಾ ದಾದ್ರಿ ರಸ್ತೆಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಶಾಲಾ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಈ ಅಪಘಾತದಲ್ಲಿ ಐದು ಮಕ್ಕಳು ಸಾವನ್ನಪ್ಪಿದ್ದಾರೆ. ಇನ್ನೂ ಹತ್ತಾರು ಮಕ್ಕಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!