ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಬುಲ್ದಾನದಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, 25 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.
ನಾಗ್‌ಪುರದಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ ಬಸ್ ಸಿಂಧ್‌ಕೇಡ್ ಮಹಾಮಾರ್ಗ ಎಕ್ಸ್‌ಪ್ರೆಸ್‌ವೇ ಬಳಿ ಡಿವೈಡರ್‌ಗೆ ಡಿಕ್ಕಿಯಾಗಿದೆ. ಇದರಿಂದಾಗಿ ಇದ್ದಕ್ಕಿದ್ದಂತೆಯೇ ಬೆಂಕಿ ಹೊತ್ತಿದ್ದು, ಪ್ರಯಾಣಿಕರು ಮೃತಪಟ್ಟಿದ್ದಾರೆ.
ಬಸ್‌ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಮಧ್ಯರಾತ್ರಿಯಾದ ಕಾರಣ ಎಲ್ಲರೂ ಗಾಢ ನಿದ್ದೆಯಲ್ಲಿದ್ದರು. ಡಿವೈಡರ್‌ಗೆ ಡಿಕ್ಕಿಯಾದನಂತರ ಬೆಂಕಿ ಹೊತ್ತಿದ್ದು, ಐದು ಮಂದಿ ಜೀವ ಉಳಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ, ಪೊಲೀಸ್ ತಂಡ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ.