ಮಹಾರಾಷ್ಟ್ರದಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದ ಬಸ್‌, ಹತ್ತು ಮಂದಿ ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಹಾರಾಷ್ಟ್ರದ ನಾಸಿಕ್‌ನ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,  10 ಮಂದಿ ಮೃತಪಟ್ಟಿದ್ದಾರೆ.

30ಕ್ಕೂ ಹೆಚ್ಚು ಮಂದಿ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಮಾಹಿತಿ ಪ್ರಕಾರ, ಬಸ್ ನಾಸಿಕ್‌ನಿಂದ ಜಲಗಾಂವ್‌ಗೆ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತ ಇದಾಗಿದ್ದು, ಪ್ರಯಾಣಿಕರನ್ನು ಹೊರತರಲು ಬಸ್‌ನ್ನು ಅರ್ಧ ಭಾಗಕ್ಕೆ ಕತ್ತರಿಸಲಾಗಿದೆ.

ಈ ಅಪಘಾತದ ಬಗ್ಗೆ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರ ನೆರವಿನಿಂದ ಗಾಯಾಳುಗಳು ಹಾಗೂ ಮೃತರನ್ನು ಬಸ್‌ನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!