ಹೊಸದಿಗಂತ ಡಿಜಿಟಲ್ ಡೆಸ್ಕ್:
ತಾಯಿ ಮತ್ತು ಇಬ್ಬರು ಮಕ್ಕಳು ರಸ್ತೆ ದಾಟುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಐದು ವರ್ಷದ ಮಗು ಸಾವನ್ನಪ್ಪಿದ್ದು. ಘಟನೆಯಲ್ಲಿ ತಾಯಿ ಹಾಗೂ ಇನ್ನೊಂದು ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿಯ ಬೃಂದಾವನ ಲಾಡ್ಜ್ ಬಳಿ ನಡೆದಿದೆ.
ಆಂಧ್ರಪ್ರದೇಶ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ನಿಂದ ಈ ಅವಘಡ ಸಂಭವಿಸಿದೆ.
ತಾಯಿ ಹಾಗೂ ಇನ್ನೊಂದು ಮಗುವಿಗೆ ಹೊಸಕೋಟೆ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಸಕೋಟೆ ಸಂಚಾರ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.