Sunday, December 3, 2023

Latest Posts

ಉತ್ತರಾಖಂಡದ ನೈನಿತಾಲ್ ಬಳಿ ಕಂದಕಕ್ಕೆ ಉರುಳಿದ ಬಸ್ : ಆರು ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಾಖಂಡದ ನೈನಿತಾಲ್‌ನಲ್ಲಿ ಕಂದಕಕ್ಕೆ ಬಸ್ ಉರುಳಿದ್ದು, ಆರು ಮಂದಿ ಮೃತಪಟ್ಟಿದ್ದಾರೆ.ಅಪಘಾತದಲ್ಲಿ 27 ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 33 ಜನರಿದ್ದ ಬಸ್ ಹರಿಯಾಣದಿಂದ ಹಿಸಾರ್‌ಗೆ ಬರುತ್ತಿತ್ತು.

ಈ ವೇಳೆ ನೈನಿತಾಲ್‌ನ ಕಲಾಧುಂಗಿ ವೇಳೆ ಬಸ್ ಏಕಾಏಕಿ ಕಂದಕಕ್ಕೆ ಉರುಳಿಬಿದ್ದಿದೆ. ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದು, ಉಳಿದವರು ಗಾಯಗೊಂಡಿದ್ದಾರೆ.

ಸ್ಥಳೀಯ ರಾಜ್ಯ ವಿಪತ್ತು ನಿರ್ವಹಣಾ ಪಡೆ ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಈ ಬಗ್ಗೆ ಸಿಎಂ ಪುಷ್ಕರ್ ಸಿಂಗ್ ಧಾಮಿ ಮಾತನಾಡಿದ್ದು, ಕಮರಿಗೆ ಬಸ್ ಉರುಳಿಬಿದ್ದು ಆರು ಮಂದಿ ಮೃತಪಟ್ಟಿದ್ದಾರೆ, 27ಮಂದಿ ಗಾಯಗೊಂಡಿದ್ದಾರೆ. ಘಟನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ. ರಕ್ಷಣಾ ಕಾರ್ಯಾಚರಣೆ ಬಿರುಸಾಗಿ ಸಾಗಲಿದೆ, ಗಾಯಗೊಂಡವರ ಆರೈಕೆ ಮಾಡಲಾಗುತ್ತಿದೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!