Sunday, November 27, 2022

Latest Posts

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್: 12 ಜನ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿ ಮಠದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಮಹಿಳೆಯರು ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉತ್ತರಾಖಂಡದ ಚಮೋಲಿ ಜಿಲ್ಲೆಯ ಉರ್ಗಾಮ್ ಕಣಿವೆಯಲ್ಲಿ ನಿರ್ಮಾಣ ಹಂತದಲ್ಲಿರುವ ಉರ್ಗಾಮ್-ಪಲ್ಲಾ ಜಖೋಲಾ ಮಾರ್ಗದಲ್ಲಿ ವಾಹನ ಅಪಘಾತಕ್ಕೀಡಾಗಿ ಆಳವಾದ ಕಂದರಕ್ಕೆ ಬಿದ್ದಿದೆ. ಬಿದ್ದ ರಭಸಕ್ಕೆ ವಾಹನ ತುಂಡಾಗಿ ಬಿಡಿಭಾಗಗಳು ಚೆಲ್ಲಾಪಿಲ್ಲಿಯಾಗಿವೆ. ಮೃತದೇಹಗಳು ಕೂಡ ಚೆಲ್ಲಾಪಿಲ್ಲಿಯಾಗಿವೆ.
ಇದುವರೆಗೆ 12 ಮಂದಿ ಅಪಘಾತ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಹಿಮಾಂಶು ಖುರಾನಾ ತಿಳಿಸಿದ್ದಾರೆ. ಐವರು ಗಾಯಗೊಂಡಿದ್ದು, ಈ ಪೈಕಿ ಮೂವರನ್ನು ರಸ್ತೆಗೆ ಕರೆತರಲಾಗಿದೆ. ಮಾಹಿತಿ ಪ್ರಕಾರ ವಾಹನದಲ್ಲಿ 17 ಮಂದಿ ಇದ್ದರು.
ಅಪಘಾತದ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಮ್ಯಾಜಿಸ್ಟ್ರೇಟ್ ಹಿಮಾಂಶು ಖುರಾನಾ ಮತ್ತು ಪೊಲೀಸ್ ಅಧೀಕ್ಷಕ ಪ್ರಮೇಂದ್ರ ದೋಬಾಲ್ ಅವರು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳೊಂದಿಗೆ ಸ್ಥಳಕ್ಕೆ ತಲುಪಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!