Monday, September 8, 2025

SHOCKING |ಮಸಣವಾಯ್ತು ಮದುವೆ ಮನೆ: ಅಪಘಾತಕ್ಕೆ ಯುವತಿ ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಿವಮೊಗ್ಗ ನಗರದ ಮಲವಗೊಪ್ಪದ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಇನ್ನೇನು 15 ದಿನಗಳಲ್ಲಿ ಹನೆಮಣೆ ಏರಬೇಕಿದ್ದ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ.

ಮೃತ ಯುವತಿಯನ್ನು ಕವಿತಾ (26) ಎಂದು ಗುರುತಿಸಲಾಗಿದೆ. ಆಕೆ ತನ್ನ ಸಹೋದರನ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಈ ಅಫಘಾತ ಸಂಭವಿಸಿದೆ.

ಇನ್ನೊಂದು ಬೈಕ್‌ನಲ್ಲಿ ಮಿತಿಮೀರಿದ ಲಗೇಜ್‌ ತುಂಬಿಕೊಂಡ ವ್ಯಕ್ತಿ ಇವರು ಹೋಗುತ್ತಿದ್ದ ಬೈಕ್‌ಗೆ ತಾಕಿಸಿದ್ದಾನೆ. ಈ ವೇಳೆ ಯುವತಿಯ ಸಹೋದರ ಫುಟ್‌ಪಾತ್‌ ಮೇಲೆ ಬಿದ್ದರೆ, ಆಕೆ ರಸ್ತೆಗೆ ಬಿದ್ದಿದ್ದಳು. ಈ ವೇಳೆ ಹಿಂದೆ ಇದ್ದ ಸಿಟಿ ಬಸ್‌ ಆಕೆಯ ಮೇಲೆ ಹರಿದಿದೆ. ಪರಿಣಾಮ ಕವಿತಾ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. 

ಕುಟುಂಬದವರು ಈ ಅಪಘಾತದಿಂದ ಶಾಕ್‌ನಲ್ಲಿದ್ದಾರೆ.

ಇದನ್ನೂ ಓದಿ