August 26, 2026
Wednesday, August 26, 2026
spot_img

ಅಭೀಜಿತ್ ದೀಪ್ಕೆ ನೇತೃತ್ವದಲ್ಲಿ ವಿಜಯದ ಕಹಳೆ: ಧರಣಿ ಸ್ಥಳದಲ್ಲಿ ಹಬ್ಬದ ವಾತಾವರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ ಅಂಗಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕಾರ್ಯಕರ್ತರ ಉತ್ಸಾಹ ಮುಗಿಲು ಮುಟ್ಟಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆಯೇ, ಧರಣಿ ನಿರತ ಸಿಜೆಪಿ ಬೆಂಬಲಿಗರು ಭಾರಿ ವಿಜಯೋತ್ಸವ ಆಚರಿಸಿದರು.

ನೀಟ್ ಅಕ್ರಮದ ವಿರುದ್ಧದ ಹೋರಾಟ

ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದ್ದ ನೀಟ್ ಪರೀಕ್ಷಾ ಅಕ್ರಮದ ಸರಣಿ ವಿವಾದಗಳ ಬೆನ್ನಲ್ಲೇ, ಶಿಕ್ಷಣ ಸಚಿವರ ಈ ನಿರ್ಗಮನವು ರಾಷ್ಟ್ರ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆಯಾಗಿ ಹೊರಹೊಮ್ಮಿದೆ. ಸಚಿವರ ರಾಜೀನಾಮೆಗೆ ಪಟ್ಟು ಹಿಡಿದು ಸುದೀರ್ಘ ಹೋರಾಟ ನಡೆಸುತ್ತಿದ್ದ ಸಿಜೆಪಿ ಕಾರ್ಯಕರ್ತರಿಗೆ ಈ ಬೆಳವಣಿಗೆಯಿಂದ ದೊಡ್ಡ ಜಯ ಸಿಕ್ಕಂತಾಗಿದೆ.

ಅಭೀಜಿತ್ ದೀಪ್ಕೆ ನೇತೃತ್ವದಲ್ಲಿ ಜಯಘೋಷ

ಸಚಿವರು ರಾಜೀನಾಮೆ ನೀಡಿದ ವಿಚಾರ ಖಚಿತವಾಗುತ್ತಿದ್ದಂತೆಯೇ ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿದ್ದ ಜನರ ಸಡಗರ ಇಮ್ಮಡಿಯಾಯಿತು. ಸಿಜೆಪಿ ಸಂಸ್ಥಾಪಕ ಅಭೀಜಿತ್ ದೀಪ್ಕೆ ಹಾಗೂ ಹಲವು ಪ್ರಮುಖ ಮುಖಂಡರು ಕಾರ್ಯಕರ್ತರೊಂದಿಗೆ ಸೇರಿ ವಿದ್ಯಾರ್ಥಿ ಶಕ್ತಿಯ ಪರವಾಗಿ ಜಯಘೋಷಗಳನ್ನು ಕೂಗಿ ತಮ್ಮ ಅಪಾರ ಸಂತಸವನ್ನು ವ್ಯಕ್ತಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !