ದೊಡ್ಡಬಳ್ಳಾಪುರದ ಬಳಿ ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್‌ ಪಲ್ಟಿ, ಕೈಗೆರಡು ಹಣ್ಣು ಹೊತ್ತೊಯ್ದ ಜನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾದ ಘಟನೆ ದೊಡ್ಡಬಳ್ಳಾಪುರ ಹೊರ ವಲಯದಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ವೇದಮೂರ್ತಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡಬಳ್ಳಾಪುರ ಹೊರ ವಲಯದ ಮೇಷ್ಟ್ರು ಮನೆ ಸರ್ಕಲ್‌ ಬಳಿ ಈ ಅಪಘಾತ ಸಂಭವಿಸಿದೆ. ಚೆನ್ನೈನಿಂದ ದಾವಣಗೆರೆಯ ಹೊನ್ನಾಳಿಗೆ ಕಲ್ಲಂಗಡಿ ಸಾಗಿಸುತ್ತಿದ್ದ ಈ ಕ್ಯಾಂಟರ್, ಅನಿರೀಕ್ಷಿತವಾಗಿ ನಿಯಂತ್ರಣ ಕಳೆದುಕೊಂಡಿದೆ. ವೇಗವಾಗಿ ಬರುತ್ತಿದ್ದ ಕ್ಯಾಂಟರ್ ಹೆದ್ದಾರಿಯಲ್ಲಿದ್ದ ಮೂರು ಡಿವೈಡರ್‌ಗಳನ್ನು ದಾಟಿ ಪಕ್ಕದ ಹಳ್ಳಕ್ಕೆ ಬಂದು ಬಿದ್ದಿದೆ. ಅಪಘಾತದ … Continue reading ದೊಡ್ಡಬಳ್ಳಾಪುರದ ಬಳಿ ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್‌ ಪಲ್ಟಿ, ಕೈಗೆರಡು ಹಣ್ಣು ಹೊತ್ತೊಯ್ದ ಜನ