ಹೊಸದಿಗಂತ ವರದಿ ಶಿವಮೊಗ್ಗ:
ಎರಡು ಕಾರುಗಳ ಮುಖಾಮುಖಿ ಡಿಕ್ಕಿಯಿಂದ ಮೂವರು ಸ್ಥಳದಲ್ಲೇ ಮೃತಪಟ್ಟು, ಒಬ್ಬರು ತೀವ್ರ ಗಾಯಗೊಂಡಿರುವ ಘಟನೆ ಬಿ.ಎಚ್. ರಸ್ತೆಯ ಮುದ್ದಿನಕೊಪ್ಪ ಟ್ರೀಪಾರ್ಕ್ ಬಳಿ ಇಂದು ನಡೆದಿದೆ.
ಜೋಗಕ್ಕೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಇನ್ನೋವಾ ಕಾರು ಹಾಗೂ ಶಿವಮೊಗ್ಗಕ್ಕೆ ಬರುತ್ತಿದ್ದ ಸ್ವಿಪ್ಟ್ ಕಾರಿನ ನಡುವೆ ಡಿಕ್ಕಿಯಾಗಿದೆ. ಸ್ವಿಫ್ಟ್ ಕಾರು ಚಾಲಕ ವಾಹನವೊಂದನ್ನು ಓವರ್‌ಟೇಕ್ ಮಾಡಿಕೊಂಡು ಮುಂದೆ ಹೋಗಲು ಯತ್ನಿಸಿದಾಗ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿಯಾಗಿದೆ.
ಮೃತರಲ್ಲಿ ಒಬ್ಬರನ್ನು ಚಳ್ಳಕೆರೆಯ ಬೆಳಲಗೆರೆ ಇಮಾಮ್ ಎಂದು ಗುರುತಿಸಲಾಗಿದೆ. ಇನ್ನಿಬ್ಬರ ಗುರುತು ಪತ್ತೆಯಾಗಬೇಕಿದೆ. ಇನ್ನೋವಾ ಚಾಲಕ ಗಿರೀಶ ಗಂಭೀರವಾಗಿ ಗಾಯಗೊಂಡಿದ್ದಾರೆ. ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.