ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಎಂಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ನಡುರಸ್ತೆಯಲ್ಲೇ ಕಾರು ಹೊತ್ತಿ ಉರಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.
ವೇಗವಾಗಿ ಬಂದ ಕಾರು ಬಿಎಂಟಿಸಿ ಬಸ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನೊಳಗೆ ಬೆಂಕಿ ವ್ಯಾಪಿಸಿ ಹೊತ್ತಿ ಉರಿದಿರುವ ಘಟನೆ ನಾಯಂಡಹಳ್ಳಿಯ ರಿಂಗ್ ರಸ್ತೆಯಲ್ಲಿ ನಡೆದಿದೆ.
ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ತಕ್ಷಣ ಕೆಳಗಿಳಿದಿದ್ದಾರೆ. ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ಸಿನಲ್ಲಿದ್ದ ಪ್ರಯಾಣಿಕರು ಕೂಡ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.