ಹೊಸದಿಗಂತ ಡಿಜಿಟಲ್ ಡೆಸ್ಕ್:
ದೀಪಾವಳಿ ಸಂಭ್ರಮಾಚರಣೆ ಮಧ್ಯೆ ಚಿತ್ರದುರ್ಗದಲ್ಲಿ ಅಪಘಾತ ಸಂಭವಿಸಿದೆ. ಇಂದು ಬೆಳಗಿನ ಜಾವ ಚಿತ್ರದುರ್ಗದ ಪ್ರವಾಸಿ ಮಂದಿರ ಬಳಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಕಾರು ಪಲ್ಟಿಯಾಗಿದ್ದು, ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹರೀಶ್, ಸಚಿನ್ ಹಾಗೂ ಮನು ಮೃತರು. ಗಾಯಗೊಂಡವರನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.