ನಿಂತಿದ್ದ ಲಾರಿಗೆ ಡಿಕ್ಕಿಯಾದ ಕಾರ್: ಸಾವಿರಾರು ಜೀವ ಉಳಿಸಬೇಕಿದ್ದ ಯುವ ವೈದ್ಯ ಸಾವು

ಹೊಸದಿಗಂತ ವರದಿ ಬೆಳಗಾವಿ:

ರಸ್ತೆ ಪಕ್ಕ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವ ವೈದ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಎಂಬಿಎ ಪದವೀಧರರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಯಡಿಯೂರಪ್ಪ ಮಾರ್ಗದಲ್ಲಿ ತಡರಾತ್ರಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಯುವ ವೈಸ್ಯ ಸೌರಬ್ ಕಾಂಬಳೆ (25) ಮೃತಪಟ್ಟಿದ್ದು, ಜಮಖಂಡಿಯ ಗಿರೀಶ ಕರೆಮ್ಮನವರ (25), ಚೇತನ್ ಧರಿಗೌಡರ (25) ಗಂಭೀರ ಗಾಯಗೊಂಡಿದ್ದು, ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾತ್ರಿ ಪಾರ್ಟಿ ಮುಗಿಸಿ ಮರಳುವಾಗ ರಸ್ತೆ ಬದಿ ನಿಂತ ಲಾರಿಗೆ ರಭಸವಾಗಿ ಕಾರು ಗುದ್ದಿದ್ದು, ಅಪಘಾತದ ರಭಸಕ್ಕೆ ಕಾರು ನಾಲ್ಕೈದು ಸಲ ಪಲ್ಟಿಹೊಡೆದಿದೆ. ಸ್ಥಳಕ್ಕೆ ಬೆಳಗಾವಿ ದಕ್ಷಿಣ ಸಂಚಾರ ಠಾಣೆ ‌ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!