ACCIDENT | ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರ್ ಡಿಕ್ಕಿ , ಮತ್ತೊಂದು ಹಿಟ್ ಆಂಡ್ ರನ್ !

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಆಂಡ್ ರನ್ ಪ್ರಕರಣ ದಾಖಲಾಗಿದೆ. ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರ್ ಡಿಕ್ಕಿಯಾಗಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಒಂದು ಜೀವದ ಸಾವಿಗೆ ಕಾರಣಕರ್ತರಾಗಿದ್ದೇನೆ, ಅಥವಾ ಆ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿದರೆ ಬಹುಕಬಹುದೇನೋ ಎನ್ನುವ ಕನಿಷ್ಠ ಪ್ರಜ್ಞೆಯೂ ಇಲ್ಲದೆ ಡಿಕ್ಕಿ ಹೊಡೆದ ವ್ಯಕ್ತಿ ಓಡಿಹೋಗಿದ್ದಾನೆ.

ಮೈಸೂರ್ ರೋಡ್‌ನ ಕೆ.ಆರ್. ಮಾರ್ಕೆಟ್ ಫ್ಲೈ ಓವರ್ ಬಳಿ ಅಪಘಾತ ಸಂಭವಿಸಿದೆ. ವ್ಯಕ್ತಿಯ ಗುರುತು ಸಿಕ್ಕಿಲ್ಲ. ಡಿಕ್ಕಿ ಹೊಡೆದ ಕಾರ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು, ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!